
Dattatraya Patil
Articles
-
Jan 15, 2025 |
tv9kannada.com | Dattatraya Patil
ಕಲಬುರಗಿ, ಜನವರಿ 15: ಕಲಬುರಗಿ ಪಾಲಿಕೆ ಆಯುಕ್ತರ ಸಹಿ ನಕಲು (Forged signature) ಮಾಡಿ ಹಣ ಡ್ರಾ ಪ್ರಕರಣದಲ್ಲಿ ಪಾಲಿಕೆ ಆಯುಕ್ತರ ಪಿಎ ಸೇರಿ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪಿಎ ಮೊಹಮ್ಮದ್ ನಯಿಮೋದ್ದಿನ್, ವಾಜೀದ್ ಇಮ್ರಾನ್, ಮಿರ್ಜಾ ಬೇಗ್, ನಸೀರ್ ಅಹ್ಮದ್ ಮತ್ತು ಮೊಹಮ್ಮದ್ ರೆಹಮಾನ್ ಬಂಧಿತರು. ಬಂಧಿತರಿಂದ 30 ಲಕ್ಷ ರೂ. ಹಣ ಜಪ್ತಿ ಮಾಡಿಕೊಂಡಿದ್ದು, ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚೆಕ್ಬುಕ್ನಲ್ಲಿ ಆಯುಕ್ತರ ನಕಲಿ ಸಹಿ ಮಾಡಿ ಬ್ಯಾಂಕ್ಗೆ 1 ಕೋಟಿ 32 ಲಕ್ಷ ರೂ. ಹಣ ವಿತ್ ಡ್ರಾಗೆ 3 ಚೆಕ್ಗಳನ್ನು ನೌಕರರು ಕಳಿಸಿದ್ದರು.
-
Jan 6, 2025 |
tv9kannada.com | Dattatraya Patil
ಕಲಬುರಗಿ, ಜನವರಿ 7: ಬೀದರ್ನ ಯುವ ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣ ರಾಜ್ಯಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ. ಅದರಲ್ಲೂ ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ರಾಜು ಕಪನೂರ್ ಹಾಗೂ ಗ್ಯಾಂಗ್ ಕಿರುಕುಳದಿಂದಲೇ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಸಚಿನ್ ಡೆತ್ ನೋಟ್ ಬರೆದಿಟ್ಟಿದ್ದು, ದೊಡ್ಡ ಮಟ್ಟದ ಸಂಚಲನಕ್ಕೆ ಕಾರಣವಾಗಿತ್ತು. ಇದೇ ವಿಷಯ ರಾಜ್ಯ ಸರ್ಕಾರ ಹಾಗೂ ಖುದ್ದು ಸಚಿವ ಪ್ರಿಯಾಂಕ್ ಖರ್ಗೆಗೂ ಸಂಕಷ್ಟ ತಂದಿಟ್ಟಿತ್ತು. ಆದರೆ, ಘಟನೆ ನಡೆದು 12 ದಿನ ಕಳೆದರೂ ಆರೋಪಿಗಳ ಬಂಧನವಾಗಿಲ್ಲ. ಈ ಬಗ್ಗೆ ಪ್ರತಿಕ್ಷ ಬಿಜೆಪಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ.
-
Dec 6, 2024 |
tv9kannada.com | Dattatraya Patil
ಕಲಬುರಗಿ, ಡಿಸೆಂಬರ್ 06: ಸಾವಿನ ಕೊನೆ ಕ್ಷಣದಲ್ಲಿ ಮನೆ ಸೇರಬೇಕೆಂದು ಕೋರಿಕೆ ಇಟ್ಟಿದ್ದ 93 ವರ್ಷದ ವೃದ್ಧೆಯ (Old woman) ಕೊನೆ ಆಸೆಯನ್ನು ಉಪಲೋಕಾಯುಕ್ತ ನ್ಯಾ.ಬಿ.ವೀರಪ್ಪ ಈಡೇರಿಸಿದ್ದಾರೆ. ಮನೆಗೆ ತೆರಳಿದ ಕೆಲ ದಿನಗಳ ಬಳಿಕ ವೃದ್ಧೆ ನಾಗಮ್ಮ ನಿಧನರಾಗಿದ್ದಾರೆ. ಆ ಮೂಲಕ ಅಂತಿಮ ಕ್ಷಣ ಮನೆಯಲ್ಲಿ ಕಳೆಯಬೇಕೆಂಬ ಅವರ ಆಸೆಯನ್ನು ಈಡೇರಿಸಲಾಗಿದೆ. ಸೊಸೆಗೆ ಕಿರಕುಳ ನೀಡಿದ ಪ್ರಕರಣದಲ್ಲಿ ನಾಗಮ್ಮ ಆರೋಪಿಯಾಗಿದ್ದರು. ಸೊಸೆ ಮೃತಪಟ್ಟ ಹಿನ್ನಲೆ ಕಳೆದ 26 ವರ್ಷದಿಂದ ಐಪಿಸಿ ಸೆಕ್ಷನ್ 498 ಅಡಿ ನಾಗಮ್ಮ ಹಾಗೂ ಕುಟುಂಬಸ್ಥರ ವಿರುದ್ದ ಜೇವರ್ಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
-
Dec 5, 2024 |
tv9kannada.com | Dattatraya Patil
ಕಲಬುರಗಿ, ಡಿಸೆಂಬರ್ 6: ಕಲಬುರಗಿ ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕಿ ಅನಿತಾ ಅವರ ಕಾರನ್ನು ಸ್ಫೋಟಿಸುವ ಬೆದರಿಕೆ ಸಂದೇಶ ಬಂದ ಕೆಲವೇ ದಿನಗಳಲ್ಲಿ ಜೈಲಿನಲ್ಲಿ ಮತ್ತಷ್ಟು ಕಠಿಣ ಕ್ರಮಗಳನ್ನು ಕೈಗೊಳ್ಳಲಾಗಿದೆ. 2013ರ ಬೆಂಗಳೂರಿನ ಮಲ್ಲೇಶ್ವರಂ ಬಾಂಬ್ ಸ್ಫೋಟ ಪ್ರಕರಣದ ಆರೋಪಿ, ಶಂಕಿತ ಉಗ್ರ ಜುಲ್ಫಿಕರ್ ಸೇರಿದಂತೆ 6 ಮಂದಿ ಕೈದಿಗಳನ್ನು ಕರ್ನಾಟಕದ ಇತರ ಜೈಲುಗಳಿಗೆ ಸ್ಥಳಾಂತರ ಮಾಡಲಾಗಿದೆ. ಬೆಳಗಾವಿ, ಧಾರವಾಡ, ಶಿವಮೊಗ್ಗ ಮತ್ತು ಬಳ್ಳಾರಿ ಜೈಲುಗಳಿಗೆ ಸ್ಥಳಾಂತರ ಮಾಡಲಾಗಿದೆ.
-
Dec 1, 2024 |
tv9kannada.com | Dattatraya Patil
ಕಲಬುರಗಿ, ಡಿಸೆಂಬರ್ 01: ಕಲಬುರಗಿ ಕೇಂದ್ರ ಕಾರಾಗೃಹದ (Kalaburagi Central Jail) ಮುಖ್ಯ ಅಧೀಕ್ಷಕಿ ಅನಿತಾ ಅವರ ಕಾರು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ ಆರೋಪದ ಮೇಲೆ ಇಬ್ಬರು ಮಹಿಳಾ ಕೈದಿಗಳು ಸೇರಿದಂತೆ ಒಟ್ಟು ಒಂಬತ್ತು ಕೈದಿಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ. ಜೈಲು ಮುಖ್ಯ ಅಧೀಕ್ಷಕಿ ಅನಿತಾ ದೂರಿನ ಆಧಾರದ ಮೇಲೆ ಕೈದಿಗಳಾದ ಮುಸ್ತಫಾ, ನಸೀರ್, ಬಚ್ಚನ್, ಅಲ್ತಾಫ್, ದೇವರಾಜ್, ನಾಗರಾಜ್, ಶ್ರೀಕಾಂತ್ ಸೇರಿದಂತೆ ಒಬ್ಬಂತು ಜನರ ವಿರುದ್ಧ ಫರಹತಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಡಾ.
Try JournoFinder For Free
Search and contact over 1M+ journalist profiles, browse 100M+ articles, and unlock powerful PR tools.
Start Your 7-Day Free Trial →